Home | ಉ.ಕ.ಜಿಲ್ಲಾ ವಾರ್ತೆ | ಭಟ್ಕಳ | ಬೋರ್ಡ್ ಆಫ್ ಇಸ್ಲಾಮಿಕ್ ಎಜ್ಯುಕೇಶ: ಪ್ರಶಸ್ತಿ ಪ್ರದಾನ ಸಮಾರಂಭ

ಬೋರ್ಡ್ ಆಫ್ ಇಸ್ಲಾಮಿಕ್ ಎಜ್ಯುಕೇಶ: ಪ್ರಶಸ್ತಿ ಪ್ರದಾನ ಸಮಾರಂಭ

Font size: Decrease font Enlarge font
image

ಭಟ್ಕಳ: ಬೋರ್ಡ್ ಆಫ್ ಇಸ್ಲಾಮಿಕ್ ಎಜ್ಯುಕೇಶನ್ ವತಿಯಿಂದ ಜರುಗಿದ ಇಸ್ಲಾಮಿಕ್ ಸರ್ಟಿಫಿಕೇಟ್ ಕೋರ್ಸ್ ಹಾಗೂ ಇಸ್ಲಾಮಿಕ್ ಡಿಪ್ಲೋಮಾ ಕೋರ್ಸ್‌ಗಳಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳಿಗೆ ಹೆಬಳೆ ಗ್ರಾ.ಪಂ ವ್ಯಾಪ್ತಿಯ ಶಮ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪ್ರಶಸ್ತಿ ಪತ್ರ ಹಾಗೂ ಬಹುಮಾನ ವಿತರಣ ಸಮಾರಂಭವು ಇತ್ತಿಚೆಗೆ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸೈಯ್ಯದ್ ಆಶ್ರಫ್ ಬರ್ಮಾವರ್ ಔಪಚಾರಿಕ ಶಿಕ್ಷಣದ ಜತೆಗೆ ಇಸ್ಲಾಮಿಕ್ ಶಿಕ್ಷಣ ಪಡೆಯುವ ಅವಕಾಶ ವಿದ್ಯಾರ್ಥಿಗಳಿಗೆ ದೊರೆತಿದೆ ಇದರ ಪ್ರಯೋಜನವನ್ನು ಪಡೆಯಬೇಕೆಂದು ಅವರು ಕರೆ ನೀಡಿದರು. ನಮಗೆ ಧಾರ್ಮಿಕ ಶಿಕ್ಷಣದ ಅವಶ್ಯಕತೆ ಹಿಂದೆಂದಿಗಿಂತಲೂ ಇಂದು ಅತಿ‌ಅವಶ್ಯಕವಾಗಿದೆ. ವಿದ್ಯಾರ್ಥಿಗಳನ್ನು ಸರಿಯಾದ ಮಾರ್ಗದಲ್ಲಿ ನಡೆಯುವಂತಾಗಲು ಶಾಲೆಗಳಲ್ಲಿ ನೈತಿಕ ಶಿಕ್ಷಣವು ಅವಶ್ಯಕವಾಗಿದೆ. ಬೋರ್ಡ ಆಫ್ ಇಸ್ಲಾಮಿಕ್ ಎಜ್ಯುಕೇಶನ್ ಸಂಸ್ಥೆಯು ಈ ಕಾರ್ಯವನ್ನು ಮಾಡುತ್ತಿರುವುದು ಶ್ಲಾಘನೀಯವೆಂದರು.
ಮುಖ್ಯ ಅತಿಥಿಯಾಗಿ ರಾಬಿತಾ ಸಂಸ್ಥೆಯ ಅಧ್ಯಕ್ಷ ಸೈಯ್ಯದ್ ಅಬ್ದುಲ್ಲಾ ಲಂಕಾ ಉಪಸ್ಥಿತರಿದ್ದರು. ಬೋರ್ಡ ಆಫ ಇಸ್ಲಾಮಿಕ್ ಎಜ್ಯುಕೇಶನ್ ಭಟ್ಕಳ ಘಟಕದ ಸಂಚಾಲಕ ಪ್ರೋ: ಝರ‍್ಝರಿ ಪ್ರಸ್ಥಾವಿಕವಾಗಿ ಮಾತನಾಡಿ ಬೋರ್ಡ್ ಆಫ್ ಇಸ್ಲಾಮಿಕ್ ಎಜ್ಯುಕೇಶನ್ ಇಸ್ಲಾಮಿಕ್ ಸರ್ಟಿಫಿಕೇಟ್ ನೀಡುವ ಒಂದು ಮುಕ್ತ ವಿಶ್ವವಿದ್ಯಾಲಯದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದೆ. ಸಾವಿರಾರು ವಿದ್ಯಾರ್ಥಿಗಳು ಯಾವುದೆ ಜಾತಿ,ಭಾಷೆ ಎನ್ನದೆ ಇದರೆ ಪ್ರಯೋಜನವನ್ನು ಪಡೆಯುತ್ತಿದ್ದಾರೆ ಎಂದ ಅವರು ಈ ವರ್ಷ ಭಟ್ಕಳದಲ್ಲಿ ಒಂದು ಸಾವಿರ ವಿದ್ಯಾರ್ಥಿಗಳು ಇಸ್ಲಾಮಿಕ್ ಕೋರ್ಸ್‌ನ ಪರೀಕ್ಷೆಗೆ ಹಾಜರಾಗಿದ್ದರು. ಮುಂದಿನ ವರ್ಷಗಳಲ್ಲಿ ಉತ್ತಮ ನಿರೀಕ್ಷೆಯನ್ನು ಇಟ್ಟುಕೊಟ್ಟಳಾಗಿದೆ ಎಂದರು. ಜಮಾತೆ ಇಸ್ಲಾಮಿ ಹಿಂದ್ ನ ಉಸ್ಮಾನ್ ಮೊಹತೆಶಮ್, ಶಮ್ಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಚಾರ್ಯ ಮುಹಮ್ಮದ್ ಶಫಿ ಶೇಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಡಿಪ್ಲೋಮಾ ಪರೀಕ್ಷೆಯಲ್ಲಿ ಅತ್ತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಮುಹಮ್ಮದ್ ತಾರೀಖ್, ರಹೀಖ್ ಕೋಲಾ, ಹಾಗೂ ಮುಹಮ್ಮದ್ ಉಕಾಶ ರನ್ನು ಪ್ರಶಸ್ತಿ ಪತ್ರ ಹಾಗೂ ಬಹುಮಾನವನ್ನು ನೀಡಿ ಪುರಸ್ಕರಿಸಿದರು. ರಿಯಾಝ್ ಅಹ್ಮದ್ ಕಾಯಕ್ರಮ ನಿರೂಪಿಸಿದರು. ಸೈಯದ್ಯ ಖುತುಬ್ ಬರ್ಮಾವರ್ ಧನ್ಯವಾದ ಅರ್ಪಿಸಿದರು.


Comments (0 posted):

Post your comment comment

Please enter the code you see in the image:

  • email Email to a friend
  • print Print version
  • Plain text Plain text
Rate this article
0
Powered by SahilOnline.org