ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಸಾವಯನ ಕೃಷಿ ಕಾರ್ಯಗಾರ
ಚಾಮರಾಜನಗರ, ಮಾ.೯: ರೈತರಿಗಾಗಿ ಸಾವಯವ ಕೃಷಿಗೆ ಸಂಬಂಧಿಸಿದಂತೆ ಎರಡು ದಿನಗಳ ಕಾರ್ಯಗಾರಕ್ಕೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಇಂದು ಚಾಲನೆ ನೀಡಲಾಯಿತ್ತು.
ಚಾಮರಾಜನಗರದ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಕೃಷಿ ಇಲಾಖೆ ಹಾಗೂ ಸಾವಯವ ಕೃಷಿ ಪರಿವಾರ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ತರಬೇತಿ ಶಿಬಿರವನ್ನು ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ಭೀಮಸೇನಾ ಗೂಡೂರು ಉದ್ಘಾಟಿಸಿ ಮಾತನಾಡಿದರು.
ರೈತರು ರಸಾಯನಿಕ ಕೃಷಿಯಿಂದ ಬೇಸತ್ತು, ಕೃಷಿಗೆ ಬದಲಾಗಿ ಬೇರೆ ವೃತ್ತಿ ಅವಲಂಭಿಸಿಕೊಂಡು ಕಷ್ಟ ಜೀವನ ನಡೆಸುತ್ತಿದ್ದಾರೆ ಸಾವಯವ ಕೃಷಿಗಾಗಿ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅವುಗಳ ಸದುಪಯೋಗವನ್ನು ರೈತರು ಬಳಸಿಕೊಂಡು ಕೃಷಿಯಿಂದ ಉತ್ತಮ ಜೀವನ ರೂಪಿಸಿಕೊಳ್ಳುವುದರ ಜೊತೆಗೆ, ಆರೋಗ್ಯಕರ ಹಾಗೂ ಉತ್ತಮ ಬೆಳೆ ಬೆಳೆಯಬಹುದು ಎಂದು ಕರೆ ನೀಡಿದರು.
ಮಾರ್ಚ್ ೧೧ ರಂದು ಜಿ.ಪಂ. ಕೆ.ಡಿ.ಪಿ. ಸಭೆ
ಚಾಮರಾಜನಗರ.ಮಾ. ೯ : ಜಿಲ್ಲಾ ಪಂಚಾಯತ್‌ನ ಕರ್ನಾಟಕ ಅಭಿವೃದ್ದಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಕೆ. ರಾಜೇಶ್ವರಿ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್ ೧೧ ರಂದು ಬೆಳಿಗ್ಗೆ ೧೧ ಗಂಟೆಗೆ ಜಿ.ಪಂ. ಕೆ.ಡಿ.ಪಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ದೈಹಿಕ ಶಿಕ್ಷಕರ ಕಾರ್ಯಾಗಾರ ಮುಂದೂಡಿಕೆ
ಚಾಮರಾಜನಗರ.ಮಾ. ೯ : ಸಾರ್ವಜನಿಕ ಶಿಕ್ಷಣ ಇಲಾಖೆಯು ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಮಾರ್ಚ್ ೧೧ ರಂದು ಹಮ್ಮಿಕೊಳ್ಳಲು ನಿರ್ಧರಿಸಿದ್ದ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರವನ್ನು ವಿಶ್ವ ಕನ್ನಡದ ಸಮ್ಮೇಳನದ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Rate this article



del.icio.us
Digg
Comments (0 posted):
Post your comment