ಬಳ್ಳಾರಿ: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ: ಶ್ರೀರಾಮುಲುರನ್ನು ಬೆಂಬಲಿಸಿದ ನಾಲ್ವರಿಗೆ ಬಿಜೆಪಿಯಿಂದ ನೋಟಿಸ್
ಬಳ್ಳಾರಿ: ಬಳ್ಳಾರಿ ಗ್ರಾಮಾಂತರ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಶ್ರೀರಾಮುಲುರನ್ನು ಬೆಂಬಲಿಸಿದ ಮೂವರು ಬಿಜೆಪಿ ಶಾಸಕರು ಹಾಗೂ ಒರ್ವ ವಿಧಾನ ಪರಿಷತ್ ಸದಸ್ಯರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ನೊಟೀಸ್ ಜಾರಿಗೊಳಿಸಿದ್ದಾರೆ.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನೆಲೆಯಲ್ಲಿ ಬಿಜೆಪಿಯ ಶಾಸಕರಾದ ಸೋಮಶೇಖರ ರೆಡ್ಡಿ, ಸುರೇಶ್ ಬಾಬು, ಕೂಡ್ಲಿಗಿ ಶಾಸಕ ನಾಗೇಂದ್ರ ಹಾಗೂ ಎಂಎಲ್‌ಸಿ ಮೃತ್ಯುಂಜಯ ಜಿನಗಾರಿಗೆ ಷೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದರು.
ಒಂದೋ ಅವರು ಬಿಜೆಪಿ ಅಭ್ಯರ್ಥಿ ಗಾದಿ ಲಿಂಗಪ್ಪರನ್ನು ಬೆಂಬಲಿಸಬೇಕು. ಇಲ್ಲದಿದ್ದಲ್ಲಿ ಬಿಜೆಪಿಗೆ ರಾಜೀನಾಮೆ ನೀಡಬೇಕು ಎಂದು ಅವರು ಎಚ್ಚರಿಕೆ ನೀಡಿದರು. ಸಂಸದರಾದ ಶ್ರೀರಾಮುಲು ಸಹೋದರಿ ಶಾಂತಾ, ಸಣ್ಣ ಫಕೀರಪ್ಪ ವಿರುದ್ಧವೂ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಈಶ್ವರಪ್ಪ ತಿಳಿಸಿದರು.
Rate this article



del.icio.us
Digg
Comments (0 posted):
Post your comment