Home | ದ.ಕ.ಜಿಲ್ಲಾ ವಾರ್ತೆ | ಪುತ್ತೂರು: ಯುವಮೋರ್ಚಾದಲ್ಲಿ ಇಂದಿರಾ ಮತ್ತು ರಾಜೀವ್ ಗಾಂಧಿ ಬಗ್ಗೆ ಕೀಳಾಗಿ ಮಾತನಾಡಿದ ನಳಿನ್ ಕುಮಾರ್ ಕಟೀಲ್ - ಹೇಮನಾಥ ಶೆಟ್ಟಿ ಖಂಡನೆ

ಪುತ್ತೂರು: ಯುವಮೋರ್ಚಾದಲ್ಲಿ ಇಂದಿರಾ ಮತ್ತು ರಾಜೀವ್ ಗಾಂಧಿ ಬಗ್ಗೆ ಕೀಳಾಗಿ ಮಾತನಾಡಿದ ನಳಿನ್ ಕುಮಾರ್ ಕಟೀಲ್ - ಹೇಮನಾಥ ಶೆಟ್ಟಿ ಖಂಡನೆ

Font size: Decrease font Enlarge font
image

ಯುವಕ ಯುವತಿ ನಾಪತ್ತೆ :ಪ್ರತ್ಯೇಕ ದೂರು

ಪುತ್ತೂರು, ಜ, ೩೧: ಪುತ್ತೂರಿನಲ್ಲಿ ನಡೆದ ಬಿಜೆಪಿ ಯುವಮೋರ್ಚಾದ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಅವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ ಮತ್ತು ರಾಜೀವ ಗಾಂಧಿ ಅವರನ್ನು ಕೀಳು ಮಟ್ಟದಲ್ಲಿ ಅವಮಾನಿಸಿ ಮಾತನಾಡಿರುವುದು ಅವರ ಸಂಸ್ಕೃತಿಯನ್ನು ಬಿಂಬಿಸುತ್ತಿದೆ ಎಂದು ಆರೋಪಿಸಿರುವ ಪುತ್ತೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ  ಅವರು ಈ ಹೇಳಿಕೆಯನ್ನು ಖಂಡಿಸಿದ್ದಾರೆ. 
 
ದೇಶದ ಅತ್ಯುನ್ನತ ಸಂಸ್ಥೆಯಾದ ಲೋಕಸಭೆಗೆ ಪ್ರವೇಶಿಸಲು ಅರ್ಹತೆ ಇಲ್ಲದ ನಳಿನ್ ಕುಮಾರ್ ಸಂಸದರಾಗಿ ಚುನಾಯಿತರಾಗಿರುವುದೇ ಈ ಜಿಲ್ಲೆಯ ದುರಂತ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರನ್ನು ಅವಮಾನಿಸಿರುವ ಸಂಸದರಿಗೆ ಈ ಸ್ಥಾನದಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ. ಅವರು ತಕ್ಷಣವೇ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ದೇಶದ ಇತಿಹಾಸದ ಬಗ್ಗೆ ಸ್ವಲ್ಪವೂ ಅರಿವಿಲ್ಲದ ಸಭೆಗಳಲ್ಲಿ ಅನಾಗರಿಕವಾಗಿ ಮಾತನಾಡುವ ಸಂಸದ ನಳಿನ್ ಅವರು ಮುಂದಿನ ದಿನಗಳಲ್ಲಿ ದೇಶದ ಮಹಾನ್ ನಾಯಕರನ್ನು ಅವಮಾನಿಸಿದ್ದಲ್ಲಿ ಅವರ ವಿರುದ್ದ ಉಗ್ರ ಪ್ರತಿಭಟನೆ ನಡೆಸಬೇಕಾದೀತು ಎಂದು ಹೇಮನಾಥ ಶೆಟ್ಟಿ ಎಚ್ಚರಿಸಿದ್ದಾರೆ. 

ಯುವಕ ಯುವತಿ ನಾಪತ್ತೆ :ಪ್ರತ್ಯೇಕ ದೂರು
 
ಪುತ್ತೂರು:ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಕುಕ್ಕಾಜೆ ಎಂಬಲ್ಲಿ  ಅಪ್ತಾಪ್ತ ವಯಸ್ಸಿನ ಯುವತಿ ಹಾಗೂ ಸ್ಥಳೀಯ ಯುವಕನೋರ್ವ ಕಾಣೆಯಾಗಿರುವ ಕುರಿತು ಸಂಪ್ಯ ಪೊಲೀಸರಿಗೆ ದೂರು ನೀಡಲಾಗಿದೆ.
 
ಬಡಗನ್ನೂರು ಗ್ರಾಮದ ಕುಕ್ಕಾಜೆಯ ಆತಿಕಾ ಎಂಬವರ ಪುತ್ರಿ ಆಯಿಷಾ(೧೭) ಕಳೆದ ಶನಿವಾರ ಬೆಳಿಗ್ಗೆ ಬಟ್ಟೆ ಹೊಗೆಯಲೆಂದು ಮನೆಯಿಂದ ಹೊರ ಹೋದವಳು ನಾಪತ್ತೆಯಾಗಿರುವುದಾಗಿ ಪೊಲೀಸರಿಗೆ ದೂರು ನೀಡಲಾಗಿದೆ.
 
ಇಲ್ಲಿನ ಇಬ್ರಾಹಿಂದ ಎಂಬವರ ಪುತ್ರ ಮಹಮ್ಮದ್ ನೌಷದ್(೧೯) ಎಂಬ ಯುವಕನೂ ಶನಿವಾರದಿಂದ ನಾಪತ್ತೆಯಾಗಿರುವುದಾಗಿ ಪೊಲೀಸರಿಗೆ ದೂರು ನೀಡಲಾಗಿದೆ. ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆಯಲ್ಲಿ ಲಾರಿಯೊಂದರಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ ನೌಷದ್ ಶನಿವಾರ ಮನೆಗೆ ಬರುತ್ತಿರುವುದಾಗಿ ಪುತ್ತೂರು ತಾಲೂಕಿನ ಕುಂಬ್ರ ಎಂಬಲ್ಲಿಂದ ತನ್ನ ಮನೆಗೆ ಮೊಬೈಲ್‌ನಿಮದ ಕರೆ ಮಾಡಿದ್ದು ಆದರೆ ಮನೆಗೆ ಬಾರದೆ ನಾಪತ್ತೆಯಾಗಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಎರಡೂ ದೂರುಗಳನ್ನು ದಾಖಲಿಸಿಕೊಂಡಿರುವ ಸಂಪ್ಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. 


ಪುತ್ತೂರು: ಪುತ್ತೂರು ತಾಲೂಕಿನ ಕೆಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ , ಆದಿವಾಸಿ ಕೊರಗ ಸಮುದಾಯಕ್ಕೆ ಸೇರಿದ ಚನಿಯ ಎಂಬವರ ಪುತ್ರಿ ಗೀತಾ ಕೊಲೆ ಪ್ರಕರಣದ ಆರೋಪಿಗಳನ್ನು ತಕ್ಷಣವೇ ಪತ್ತೆ ಹಚ್ಚಿ ಬಂಧಿಸಬೇಕು ಎಂದು ಆಗ್ರಹಿಸಿ ಫೆ.೨ರಂದು ಪುತ್ತೂರು ಉಪವಿಭಾಗಾಧಿಕಾರಿಗಳ ಕಚೇರಿ ಮುಂಬಾಗದಲ್ಲಿ ಪ್ರತಿಭmನೆ ಹಾಗೂ ಸಂಪ್ಯ ಠಾಣೆಯ ತನಕ ರ್‍ಯಾಲಿ ನಡೆಸಲು ಕೊರಗರ ಜಿಲ್ಲಾ ಸಮಿತಿ ತೀರ್ಮಾನಿಸಿದೆ ಎಂದು ಸಮಿತಿಯ ಕಾರ್ಯದರ್ಶಿ ಸುರೇಶ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. 
 
ಕಳೆದ ದಶಂಬರ್ ೨೯ರಂದು ಕೆಯ್ಯೂರು ಗ್ರಾಮದ ದೇವಿನಗರ ಜನತಾ ಕಾಲೊನಿ  ನಿವಾಸಿ ಚನಿಯ ಮತ್ತು ಅಂಗಾರೆ ದಂಪತಿಯ ಪುತ್ರಿ ಗೀತಾ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಇದೊಂದು ಪೂರ್ವ ನಿಯೋಜಿತ ಕೊಲೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ. ಈ ಪ್ರಕರಣ ನಡೆದು ತಿಂಗಳು ಕಳೆದರೂ ಆರೋಪಿಗಳನ್ನು ಬಂಧಿಸದಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ ಎಂದು ಆರೋಪಿಸಿರುವ ಕೊರಗರ ಜಿಲ್ಲಾ ಸಮಿತಿಯು ಈ ಪ್ರಕರಣದ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡು ಬಂದಿಲ್ಲ ಈ ಹಿನ್ನಲೆಯಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. 


Comments (0 posted):

Post your comment comment

Please enter the code you see in the image:

  • email Email to a friend
  • print Print version
  • Plain text Plain text
Rate this article
0
Powered by SahilOnline.org