Home | ರಾಜ್ಯ ವಾರ್ತೆ | ಐ.ಎ.ಎಸ್, ಐ.ಪಿ.ಎಸ್. ತರಬೇತಿಗಾಗಿ ಅರ್ಜಿ ಆಹ್ವಾನ

ಐ.ಎ.ಎಸ್, ಐ.ಪಿ.ಎಸ್. ತರಬೇತಿಗಾಗಿ ಅರ್ಜಿ ಆಹ್ವಾನ

Font size: Decrease font Enlarge font

ಬಳ್ಳಾರಿ: ಅಖಿಲಭಾರತ ನಾಗರಿಕ ಸೇವೆಗಳಿಗೆ (ಐ.ಎ.ಎಸ್./ಐ.ಪಿ.ಎಸ್.) ಕೇಂದ್ರ ಲೋಕಸೇವಾ ಆಯೋಗ ನಡೆಸುವ ಪೂರ್ವಭಾವಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. 
ತರಬೇತಿಗೆ ಕರ್ನಾಟಕದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಪ್ರತಿಭಾನ್ವಿತ ಪದವಿ/ಸ್ನಾತಕೋತ್ತರ ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಪೂರ್ವಬಾವಿ ಪರೀಕ್ಷೆಯಲ್ಲಿ ಒಂದುಬಾರಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಪ್ರಾಚಾರ್ಯರು, ಪರೀಕ್ಷಾ ಪೂರ್ವ ತರಬೇತಿ ಕೇಂದ್ರ, ಡಾ|| ಬಿ.ಆರ್. ಅಂಬೇಡ್ಕರ್ ಭವನ, ಮಿಲ್ಲರ‍್ಸ್ ರಸ್ತೆ, ವಸಂತ ನಗರ, ಬೆಂಗಳೂರು-೫೨ ಇವರಿಂದ ಖುದ್ದಾಗಿ ಅಥವಾ ಜಾಲತಾಣ ಅನ್ನು ಸಂಪರ್ಕಿಸುವುದರ ಮೂಲಕ ಪಡೆಯಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ ೩೧ರೊಳಗಾಗಿ ಇದೇ ಕಚೇರಿಯ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

Comments (0 posted):

Post your comment comment

Please enter the code you see in the image:

  • email Email to a friend
  • print Print version
  • Plain text Plain text
Rate this article
0
Powered by SahilOnline.org