ಬೆಂಗಳೂರು: ಅಕ್ರಮ ಚಟುವಟಿಕೆ: ಪರಪ್ಪನ ಅಗ್ರಹಾರದಿಂದ 24 ಕೈದಿಗಳ ಸ್ಥಳಾಂತರ
ಬೆಂಗಳೂರು: ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹವಾದ ಪರಪ್ಪನ ಅಗ್ರಹಾರದಿಂದ 24 ಕೈದಿಗಳನ್ನು ಬೇರೆ ಜೈಲುಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪರಪ್ಪನ ಅಗ್ರಹಾರದಲ್ಲಿ ಜೂಜು, ಗಾಂಜಾ ಸೇರಿದಂತೆ ಇನ್ನಿತರ ಅಕ್ರಮ ಚಟುವಟಿಕೆ ನಡೆಯುತ್ತಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ವಿವಿಧ ಪ್ರಕರಣಗಳಲ್ಲಿ ಬಂಧಿತರಾಗಿ ಜೈಲಿನಲ್ಲಿರುವ 24 ಕೈದಿಗಳನ್ನು ಸ್ಥಳಾಂತರಿಸಲಾಗಿದೆ.
ಇವರನ್ನು ಬೆಳಗಾವಿ, ದಾರವಾಡ, ಬಳ್ಳಾರಿ ಹಾಗೂ ಬಿಜಾಪುರದ ಜೈಲುಗಳಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.
Rate this article



del.icio.us
Digg
Comments (0 posted):
Post your comment