SahilOnline - Kannada : ಸಾಹಿಲ್ ಆನ್ ‍ಲೈನ್- ಸತ್ಯದ ಒಂದು ಪ್ರತಿಬಿಂಬ: ಮತೀಯ ಅಲ್ಪಸಂಖ್ಯಾತರ ಕಾನೂನು ಪದವೀಧರರಿಗೆ ತರಬೇತಿ ಮತೀಯ ಅಲ್ಪಸಂಖ್ಯಾತರ ಕಾನೂನು ಪದವೀಧರರಿಗೆ ತರಬೇತಿ ================================================================================ yammar manvi on 28 July, 2010 06:43:00 ಗದಗ : ಮತೀಯ ಅಲ್ಪಸಂಖ್ಯಾತರ ಕಾನೂನು ಪದವೀಧರರಿಗೆ ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ತರಬೇತಿಗೆ ಆಯ್ಕೆ ಮಾಡಬೇಕಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಗದಗ ಜಿಲ್ಲೆಯವರಾಗಿದ್ದು, ವಯೋಮಿತಿ ೩೦ ವರ್ಷಗಳಿಗೆ ಮೀರಿರಬಾರದು, ತರಬೇತಿ ಭತ್ಯೆ ೧೦೦೦ ರೂ. ನೀಡಲಾಗುವುದು, ಅಭ್ಯರ್ಥಿಗಳು ಅರ್ಜಿ ಜೊತೆಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಅಥವಾ ಶಾಲಾ ಪ್ರಮಾಣ ಪತ್ರ, ಪದವಿ ಹಾಗೂ ಕಾನೂನು ಪದವಿಯಲ್ಲಿ ಪಡೆದ ಅಂಕಪಟ್ಟಿ ಪ್ರಮಾಣ ಪತ್ರದ ದೃಢೀಕೃತ ಪ್ರತಿಗಳೊಂದಿಗೆ ಲಗತ್ತಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿ: ೧೪-೮-೧೦ ಆಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾ ಆಡಳಿತಭವನ ಹುಬ್ಬಳ್ಳಿ ರಸ್ತೆ ಗದಗ ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.